¶ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
TSK
TSK · ಇಬ್ರಿಯರಿಗೆ 12:9
Treasury of Scripture Knowledge references in ಕನ್ನಡ IRV.
ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
¶ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
‹ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.›
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.