TSK

TSK · ಇಬ್ರಿಯರಿಗೆ 13:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.

¶ ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.