¶ ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
TSK
TSK · ಇಬ್ರಿಯರಿಗೆ 13:3
Treasury of Scripture Knowledge references in ಕನ್ನಡ IRV.
ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.
‹ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.›
ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
¶ ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.