TSK

TSK · ಇಬ್ರಿಯರಿಗೆ 13:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.

ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.

ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”

ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.

¶ “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›