¶ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
TSK
TSK · ಇಬ್ರಿಯರಿಗೆ 3:18
Treasury of Scripture Knowledge references in ಕನ್ನಡ IRV.
ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
¶ ಆದರೂ ನೀವು ಬೆಟ್ಟವನ್ನು ಹತ್ತಿ ನೋಡಲು ಇಷ್ಟಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿದಿರಿ.
ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”
ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.