TSK

TSK · ಇಬ್ರಿಯರಿಗೆ 4:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

¶ ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.