¶ ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
TSK
TSK · ಇಬ್ರಿಯರಿಗೆ 4:15
Treasury of Scripture Knowledge references in ಕನ್ನಡ IRV.
ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
¶ ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
‹ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?›
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
¶ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.