ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
TSK
TSK · ಇಬ್ರಿಯರಿಗೆ 6:10
Treasury of Scripture Knowledge references in ಕನ್ನಡ IRV.
ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
‹ಮತ್ತು›‹ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.
‹ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.›
‹ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ›‹ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ”› ಹೇಳುತ್ತೇನೆ.
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
¶ ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
¶ ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.
ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.
ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.