TSK

TSK · ಇಬ್ರಿಯರಿಗೆ 6:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.

ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.

‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ”› ಎಂದು ಹೇಳಿದನು.

‹ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.›

‹ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ›‹ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.›

ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.

ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.

¶ ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.

ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.