TSK

TSK · ಇಬ್ರಿಯರಿಗೆ 6:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.

ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.

“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,

‹ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.›

ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.

ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.

ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

¶ ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.