TSK

TSK · ಇಬ್ರಿಯರಿಗೆ 6:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.

ಅದಕ್ಕೆ ಯೇಸು ಪ್ರತ್ಯುತ್ತರವಾಗಿ, ‹“ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?”› ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.

¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›

ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.

‹ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.›

ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.

‹ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”›

ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.

‹ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.›

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.

¶ ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,

ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.

“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.

ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.

ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.

ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.

ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.

ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.

¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,