TSK

TSK · ಇಬ್ರಿಯರಿಗೆ 7:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.

ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,

ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ಯೇಸು ಅವರಿಗೆ, ‹“ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ›‹ಒಡಂಬಡಿಕೆಯ ರಕ್ತ.›

ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ”› ಅಂದನು.

¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.