TSK

TSK · ಇಬ್ರಿಯರಿಗೆ 7:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’

ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ‹ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು› ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.

ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.

¶ ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.