TSK

TSK · ಇಬ್ರಿಯರಿಗೆ 7:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.

ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.

ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.

“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.

“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.