ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
TSK
TSK · ಇಬ್ರಿಯರಿಗೆ 8:1
Treasury of Scripture Knowledge references in ಕನ್ನಡ IRV.
ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
¶ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.