TSK

TSK · ಇಬ್ರಿಯರಿಗೆ 8:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

¶ “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.

ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

¶ ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.

ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.