TSK

TSK · ಇಬ್ರಿಯರಿಗೆ 8:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.

¶ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.

¶ ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?

ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.