TSK

TSK · ಇಬ್ರಿಯರಿಗೆ 8:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.

¶ ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.

¶ ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.

ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.