TSK

TSK · ಇಬ್ರಿಯರಿಗೆ 9:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.

ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.

ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.

ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.

¶ ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.