TSK

TSK · ಇಬ್ರಿಯರಿಗೆ 9:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.

¶ “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.

ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.

ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.