TSK

TSK · ಇಬ್ರಿಯರಿಗೆ 9:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.

¶ ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.

ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.

ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.

¶ ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.