TSK

TSK · ಹೋಶೇ 10:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.

¶ ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.

ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.

ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.

ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.

¶ ‹“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.›

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.