TSK

TSK · ಹೋಶೇ 10:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.

¶ ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.

ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.

‹ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.›