TSK

TSK · ಹೋಶೇ 12:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.

ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.

¶ ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

¶ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,