TSK

TSK · ಹೋಶೇ 13:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.

ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.

ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.

ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.

ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.

ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.