TSK

TSK · ಹೋಶೇ 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.

ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.

“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.