TSK

TSK · ಹೋಶೇ 13:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ

ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.

ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.

ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”

ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.

ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”