TSK

TSK · ಹೋಶೇ 14:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.

ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.

ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.

ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.

ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.

ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”

ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

‹ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.›