TSK

TSK · ಹೋಶೇ 2:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.

ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.

ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.

(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”

¶ ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.

ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.

ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.

ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

¶ ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.

¶ ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.

ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,

ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

¶ ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.