TSK

TSK · ಹೋಶೇ 2:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.

ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?

ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.

ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.

¶ “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.

¶ “ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,

¶ “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.

“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.

ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.

ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.

ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.