TSK

TSK · ಹೋಶೇ 2:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.

ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.

ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”

ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.