TSK

TSK · ಹೋಶೇ 4:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.

ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,

ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.

ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.

ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.

ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.

ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.

ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;

ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.

ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.

ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.

ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?

¶ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,

ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಜಯಹೊಂದುವವನಿಗೆ›‹ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.›