TSK

TSK · ಹೋಶೇ 5:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

¶ ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.

ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.

ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.

ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.

ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.