TSK

TSK · ಹೋಶೇ 5:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.

ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

¶ ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.

¶ ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.

ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.

¶ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!

¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.