ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
TSK
TSK · ಹೋಶೇ 5:7
Treasury of Scripture Knowledge references in ಕನ್ನಡ IRV.
ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.
¶ “ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”
ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.