TSK

TSK · ಹೋಶೇ 6:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

¶ ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.

ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.

ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.

ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.

“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.

ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”

ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.

ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.

ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.

ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

¶ ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.