TSK

TSK · ಹೋಶೇ 7:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.

ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.

ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?

ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.