ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
TSK
TSK · ಹೋಶೇ 8:10
Treasury of Scripture Knowledge references in ಕನ್ನಡ IRV.
ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
¶ ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.
ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.
¶ ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.
ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;