ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
TSK
TSK · ಹೋಶೇ 8:6
Treasury of Scripture Knowledge references in ಕನ್ನಡ IRV.
¶ ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.
ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.