TSK

TSK · ಹೋಶೇ 9:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.

ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.

ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.

ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.

ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.

ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.

ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

¶ “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.

ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.

ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.

ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.