TSK

TSK · ಹೋಶೇ 9:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.

ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.

ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.

¶ ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ

ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.

ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.

ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,

ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?

ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.