TSK

TSK · ಯೆಶಾಯ 1:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.

ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.

ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

‹ನೀವು ಹೋಗಿ, ‘ನಾನು ಯಜ್ಞವನ್ನಲ್ಲ,›‹ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.›