ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.
TSK
TSK · ಯೆಶಾಯ 1:13
Treasury of Scripture Knowledge references in ಕನ್ನಡ IRV.
ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
¶ ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.
“ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ,
ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.
ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.
¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ‹“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.›
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.