TSK

TSK · ಯೆಶಾಯ 1:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.

ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,

ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.

ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

¶ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;

¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.