ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.
TSK
TSK · ಯೆಶಾಯ 1:2
Treasury of Scripture Knowledge references in ಕನ್ನಡ IRV.
ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
¶ “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
¶ ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
¶ ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?