TSK

TSK · ಯೆಶಾಯ 1:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,

ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.

ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ

ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.

ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!

ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?

ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.

¶ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!

‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›

¶ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.