TSK

TSK · ಯೆಶಾಯ 1:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.

ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.

ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.

ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.

¶ ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.

ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.

ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.

ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

¶ “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.

ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.