TSK

TSK · ಯೆಶಾಯ 1:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.

¶ ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.

ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು.