TSK

TSK · ಯೆಶಾಯ 1:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.

ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.

ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.

ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.