TSK

TSK · ಯೆಶಾಯ 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.

ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.

ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.

¶ ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.

ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.

ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.

ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!

ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.

ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”

ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’

ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!

ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.

ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.

ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.

ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”

ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”

¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.